
ಚಿಕ್ಕಬಳ್ಳಾಪುರ: ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಕಮ್ಮತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಜಿತ್ (27), ರಮ್ಯಾ (24) ಹಾಗೂ ಅಭಿಲಾಷ್ (21) ಮೃತ ದುರ್ದೈವಿಗಳು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಊಟಕ್ಕೆಂದು ಸಂಬಂಧಿಕರು ಸೇರಿದ್ದರು. ಊಟದ ಬಳಿಕ ಗೋಕುಂಟೆಗೆ ಇಳಿದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೇರಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.