ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಕೆಮಿಕಲ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡು 3 ಮಂದಿ ಸಾವು ಕಂಡಿದ್ದು, 12 ಮಂದಿ ಗಾಯಗೊಂಡಿದ್ದಾರೆ.
ಪಾಲ್ಘರ್ ಜಿಲ್ಲೆಯ ಬೋಯಿಸರ್ ಎಂಐಡಿಸಿ ಪ್ರದೇಶದಲ್ಲಿ ರಾಸಾಯನಿಕ ಕಂಪನಿಯಲ್ಲಿ ಬಾಯ್ಲರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಪಾಲ್ಘರ್ ಜಿಲ್ಲೆಯ ಬೋಯಿಸರ್ ಎಂಐಡಿಸಿ ಪ್ರದೇಶದಲ್ಲಿ ಬಾಯ್ಲರ್ ಸ್ಫೋಟದಿಂದಾಗಿ ರಾಸಾಯನಿಕ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಅವಘಡದಲ್ಲಿ ಹಲವು ಜನ ಸಿಕ್ಕಿಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಬೋಯ್ಸರ್ ಅಗ್ನಿಶಾಮಕ ದಳ ತಿಳಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.