ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 719 ರಲ್ಲಿ ಗುರುವಾರ ಮುಂಜಾನೆ ಈ ದುರ್ಘಟನೆ ನಡೆದಿದೆ.
ಉಮೇಶ್ ರಾಥೋರ್, ಮಂಗಲ್ ರಾಥೋರ್ (28) ಮತ್ತು ಆಕಾಶ್ ರಾಥೋರ್ (25) ಮೃತಪಟ್ಟವರು. ಧೀರಜ್ ರಾಥೋರ್ (22) ಮತ್ತು ಮಹೇಂದ್ರ ರಾಥೋರ್ (20) ಗಾಯಗೊಂಡಿದ್ದು, ಅವರನ್ನು ಗ್ವಾಲಿಯರ್‌ಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಮೃತಪಟ್ಟವರು ಆಕಾಶ್ ರಾಥೋರ್ ಅವರ ಸಹೋದರನ ಮದುವೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಅವರ ಕಾರು ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ದುರ್ಘಟನೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.