alex Certify ಮದುವೆ ಮೆರವಣಿಗೆ ಮೇಲೆಯೇ ನುಗ್ಗಿದ ವ್ಯಾನ್: ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಮೆರವಣಿಗೆ ಮೇಲೆಯೇ ನುಗ್ಗಿದ ವ್ಯಾನ್: ಮೂವರ ಸಾವು

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಸಿಸೌಲಾ ಖುರ್ದ್ ಗ್ರಾಮದಲ್ಲಿ ಮದುವೆ ಮೆರವಣಿಗೆ ಸಾಗುತ್ತಿದ್ದ ವೇಳೆ  ವೇಗವಾಗಿ ಬಂದ ವ್ಯಾನ್ ನುಗ್ಗಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

18 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಅಧೀಕ್ಷಕ(ಗ್ರಾಮೀಣ) ಅನಿರುದ್ಧ್ ಕುಮಾರ್ ಮಾಹಿತಿ ನೀಡಿ, ಮೀರತ್-ಬಾಗ್‌ಪತ್ ರಸ್ತೆಯಲ್ಲಿರುವ ರೆಸಾರ್ಟ್‌ ನಲ್ಲಿ ವಿವಾಹ ಸಮಾರಂಭವಿತ್ತು, ಮೆರವಣಿಗೆ ಸ್ಥಳದ ಗೇಟ್‌ ಗಳನ್ನು ತಲುಪಿದಾಗ, ವೇಗವಾಗಿ ಬಂದ ವ್ಯಾನ್ ಗುಂಪಿನ ಮೇಲೆ ನುಗ್ಗಿತು. ಆರು ಮಂದಿ ಗಾಯಗೊಂಡಿದ್ದಾರೆ. 12ನೇ ತರಗತಿಯ ವಿದ್ಯಾರ್ಥಿ ವರುಣ್ ಕುಮಾರ್ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಗಾಯಗೊಂಡರು. ಆರೋಪಿ ಚಾಲಕನನ್ನು ಬಂಧಿಸಿದ್ದೇವೆ. ಆರೋಪಿ ಕುಡಿದ ಮತ್ತಿನಲ್ಲಿದ್ದ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...