ಬರೇಲಿ: ಉತ್ತರ ಪ್ರದೇಶದ ಬರೇಲಿಯ ಹಳ್ಳಿಯೊಂದರ ಪಟಾಕಿ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಸಿರೌಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕೆಲವು ಪಕ್ಕದ ಕಟ್ಟಡಗಳಿಗೆ ಹಾನಿಯಾಗಿದೆ. ಪಟಾಕಿ ಘಟಕದ ನಿರ್ವಾಹಕರ ಪರವಾನಗಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬರೇಲಿ ಜಿಲ್ಲೆಯ ಸಿರೌಲಿ ಪ್ರದೇಶದಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಅನೇಕರು ಗಾಯಗೊಂಡಿದ್ದಾರೆ ಎಂದು ಇನ್ಸ್‌ಪೆಕ್ಟರ್ ಜನರಲ್(ಬರೇಲಿ ರೇಂಜ್) ರಾಕೇಶ್ ಸಿಂಗ್ ತಿಳಿಸಿದ್ದಾರೆ.
ಸ್ಫೋಟದಿಂದ ಮೂರು-ನಾಲ್ಕು ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯಾಗಿದೆ. ಪಟಾಕಿ ಘಟಕವನ್ನು ನಿರ್ವಹಿಸುತ್ತಿರುವ ವ್ಯಕ್ತಿಯನ್ನು ನಾಸಿರ್ ಎಂದು ಗುರುತಿಸಲಾಗಿದೆ. ಅವರು ಪರವಾನಗಿ ಹೊಂದಿದ್ದರು ಎಂದು ಹೇಳಲಾಗಿದ್ದು, ಅದರ ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಾಣಹಾನಿಗೆ ಸಂತಾಪ ಸೂಚಿಸಿದ್ದು, ಸ್ಫೋಟದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.