alex Certify ಕಾಡಂಚಿನ ಹಳ್ಳಿಗಳಿಗೆ ಹಗಲೇ 3 ಫೇಸ್ ವಿದ್ಯುತ್ : ಸಿಎಂಗೆ ಪತ್ರ ಬರೆದ ಸಚಿವ ಈಶ್ವರ್ ಖಂಡ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಡಂಚಿನ ಹಳ್ಳಿಗಳಿಗೆ ಹಗಲೇ 3 ಫೇಸ್ ವಿದ್ಯುತ್ : ಸಿಎಂಗೆ ಪತ್ರ ಬರೆದ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು :  ರಾಜ್ಯದ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ಬದಲಾಗಿ ಹಗಲು ಹೊತ್ತಿನಲ್ಲಿ ಮಾತ್ರವೇ 3 ಫೇಸ್ ವಿದ್ಯುತ್ ಒದಗಿಸುವಂತೆ ಸಿಎಂ ಸಿದ್ದರಾಮಯ್ಯಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಸಚಿವ ಈಶ್ವರ್ ಖಂಡ್ರೆ, ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸಲು ಹಗಲು ಹೊತ್ತಿನಲ್ಲಿ 3 ಫೇಸ್ ವಿದ್ಯುತ್ ನೀಡಬೇಕು. ರಾಜ್ಯಾದ್ಯಂತ ಕಾಂಡಿನಂಚಿನಲ್ಲಿರುವ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಾಣ ಹಾನಿ ಆಗುತ್ತಿದೆ. ಹೀಗಾಗಿ ಬೆಳಗಿನ ಹೊತ್ತು 3 ಫೇಸ್ ವಿದ್ಯುತ್ ನೀಡುವಂತೆ ಮನವಿ ಮಾಡಿದ್ದಾರೆ.

ಕಾಡಂಚಿನ ಗ್ರಾಮಗಳಿಗೆ ರಾತ್ರಿ ವೇಳೆ 3 ಫೇಸ್ ವಿದ್ಯುತ್ ಪೂರೈಸುವಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಸಿಎಂ ಸಿದ್ದರಾಮ್ಯಗೆ ಕೋರಿದ್ದಾರೆ. ಜೊತೆಗೆ ಈ ಸಂಬಂಧ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೂ ಪತ್ರ ಬರೆದು ಒತ್ತಾಯಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...