ಲಖನೌ: ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.
ಮೀರತ್ ನ ಲೋಹಿಯಾ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡ ಕುಸಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ. ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಇದ್ದು, ರಕ್ಷಣ ಅಕಾರ್ಯಾಚರಣೆ ನಡೆಸಲಾಗುತ್ತಿದೆ.