BIG UPDATE: ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಕೇಸ್; ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರ

ಮಂಗಳೂರು: ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿರುವ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಆಗಮಿಸಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಆಸಿಡ್ ದಾಳಿ ನಡೆಸಿದ್ದ. ಕಾಲೇಜು ಆವರಣದಲ್ಲಿ ನಿಂತಿದ್ದ ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಆಸಿಡ್ ಎರಚಿ ಪರಾರಿಯಾಗಿದ್ದ. ಘಟನೆ ನಡೆದ ಒಂದೇ ಗಂಟೆಯಲ್ಲಿ ಕಡಬ ಪೊಲೀಸರು ಕೇರಳ ಮೂಲದ ಆರೋಪಿ ಅಬಿನ್ ನನ್ನು ಬಂಧಿಸಿದ್ದಾರೆ.

ಆರೋಪಿ ಅಬಿನ್ ಎಂಬಿಎ ವಿದ್ಯಾರ್ಥಿಯಾಗಿದ್ದು, ಆಸಿಡ್ ದಾಳಿಗೆ ಒಳಗಾದ ಓರ್ವ ವಿದ್ಯಾರ್ಥಿನಿಗೆ ಪರಿಚಿತನಿದ್ದ ಎನ್ನಲಾಗಿದೆ.

ಗಾಯಾಳು ವಿದ್ಯಾರ್ಥಿನಿಯರಲ್ಲಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನಿಬ್ಬರು ವಿದ್ಯಾರ್ಥಿನಿಯರಿಗೆ ಸ್ವಲ್ಪಮಟ್ಟಿನ ಗಾಯಗಳಾಗಿದ್ದು, ಕಡಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read