alex Certify BIG NEWS: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್, ಫೈರಿಂಗ್ ನಲ್ಲಿ 3 ಯೋಧರು ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್, ಫೈರಿಂಗ್ ನಲ್ಲಿ 3 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಎನ್ ಕೌಂಟರ್ ನಡೆಸಲಾಗಿದೆ. ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎನ್ನಲಾಗಿದೆ. ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸುವ ಪ್ರಯತ್ನದಲ್ಲಿ ಘಟನೆ ನಡೆದಿದೆ. ಒಬ್ಬ ಕ್ಯಾಪ್ಟನ್, ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

ನವೆಂಬರ್ 7 ಮತ್ತು 8 ರ ಮಧ್ಯರಾತ್ರಿ ಮಚಿಲ್ ಸೆಕ್ಟರ್ ನಲ್ಲಿ ಭಾರೀ ಶಸ್ತ್ರಸಜ್ಜಿತ ಉಗ್ರರು ಅವಿತಿರುವ ಬಗ್ಗೆ ಭಾರತೀಯ ಸೇನೆ ಮತ್ತು ಬಿಎಸ್ಎಫ್ ನ ಗಸ್ತು ಪಡೆ ಪತ್ತೆ ಮಾಡಿದ ನಂತರ ಎನ್ ಕೌಂಟರ್ ನಡೆಸಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಘಟನಾ ಸ್ಥಳದಿಂದ ಎಕೆ ರೈಫಲ್ ಮತ್ತು ಎರಡು ಚೀಲ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...