
ಬೆಂಗಳೂರು: ಆರೋಗ್ಯ ಕವಚ 108 ಆಂಬುಲೆನ್ಸ್ ವಾಹನಗಳ ಸಿಬ್ಬಂದಿಗೆ ವೇತನ ಬಿಡುಗಡೆ ಮಾಡುವ ಕುರಿತಾದ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೂರು ವಾರ ಕಾಲಾವಕಾಶ ನೀಡಿದೆ.
ಆರೋಗ್ಯಕವಚ 108 ನೌಕರರ ಪರವಾಗಿ ಅಖಿಲ ಕರ್ನಾಟಕ 108 ಆಂಬುಲೆನ್ಸ್ ನೌಕರರ ಹಿತರಕ್ಷಣ ಸಂಘದ ವತಿಯಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಆರ್. ನಟರಾಜ್ ಅವರ ಪೀಠ ವಿಚಾರಣೆ ನಡೆಸಿ ಆಂಬುಲೆನ್ಸ್ ವಾಹನಗಳ ಸಿಬ್ಬಂದಿಗೆ ವೇತನ ಬಿಡುಗಡೆ ಮಾಡುವ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಮೂರು ವಾರ ಗಡುವು ನೀಡಿದೆ.