alex Certify 30 ವರ್ಷಗಳ ಸೇವಾವಧಿಯಲ್ಲಿ ಒಂದು ದಿನವೂ ರಜಾ ಹಾಕದ ಸೋಮಣ್ಣನಿಗೆ ಇಂದು ‘ನಿವೃತ್ತಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

30 ವರ್ಷಗಳ ಸೇವಾವಧಿಯಲ್ಲಿ ಒಂದು ದಿನವೂ ರಜಾ ಹಾಕದ ಸೋಮಣ್ಣನಿಗೆ ಇಂದು ‘ನಿವೃತ್ತಿ’

ಉದ್ಯೋಗದಲ್ಲಿರುವ ಪ್ರತಿಯೊಬ್ಬರು ರಜಾ ದಿನಗಳಿಗಾಗಿ ಕಾದು ಕುಳಿತಿರುತ್ತಾರೆ. ಅದರಲ್ಲೂ ಸರ್ಕಾರಿ ಉದ್ಯೋಗದಲ್ಲಿರುವ ಕೆಲವರು ಕೆಲಸ ಮಾಡುವುದಕ್ಕಿಂತ ಕಾಲ ಹರಣ ಮಾಡುವುದೇ ಹೆಚ್ಚು ಎಂಬ ಮಾತುಗಳು ಕೇಳಿ ಬರುತ್ತವೆ. ಆದರೆ ಇದಕ್ಕೆ ಹೊರತಾದ ಉದಾಹರಣೆಗಳೂ ಸಿಗುತ್ತವೆ ಆದರೆ ಅದು ಬಲು ಅಪರೂಪ. ಅಂತದೊಂದು ಅಪರೂಪದ ಪ್ರಕರಣ ಇಲ್ಲಿದೆ.

ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ತಮ್ಮ ಸೇವಾವಧಿಯಲ್ಲಿ ಒಂದೇ ಒಂದು ದಿನ ಕೂಡ ರಜಾ ಹಾಕಿಲ್ಲವೆಂದರೆ ನೀವು ನಂಬಲೇಬೇಕು. ಹೌದು, ಕುವೆಂಪು ವಿವಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಪಿ.ಸಿ. ಸೋಮಶೇಖರ್ ಇಂಥದೊಂದು ಅಪರೂಪದ ವ್ಯಕ್ತಿತ್ವ ಹೊಂದಿದವರು.

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಹ ಸಿಬ್ಬಂದಿ ಪಾಲಿಗೆ ಸೋಮಣ್ಣ ಎಂದೇ ಆತ್ಮೀಯವಾಗಿ ಗುರುತಿಸಿಕೊಂಡಿರುವ ಇವರು ಶಿವಮೊಗ್ಗ ಜಿಲ್ಲೆ ಸೊರಬದವರು. 1991 ರಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಹಂಗಾಮಿ ನೌಕರನಾಗಿ ಕೆಲಸಕ್ಕೆ ಸೇರಿದ್ದ ಇವರು ಮುಂದೆ ಹುದ್ದೆ ಕಾಯಂ ಆಗಿ ಪ್ರಥಮ ದರ್ಜೆ ಸಹಾಯಕರಾಗಿದ್ದರು.

ತಮ್ಮ ಈ ಸುದೀರ್ಘ 30 ವರ್ಷಗಳ ಸೇವಾವಧಿಯಲ್ಲಿ ಒಂದು ದಿನವೂ ರಜಾ ಹಾಕದೆ ಕೆಲಸ ಮಾಡಿದ ಇವರು ಇಂದು ನಿವೃತ್ತರಾಗುತ್ತಿದ್ದಾರೆ. ವಿಶೇಷ ಸಂಗತಿ ಎಂದರೆ ತಮ್ಮ ದುಡಿಮೆಯ ಹಣ ಕೂಡಿಟ್ಟು ವಿಶ್ವವಿದ್ಯಾನಿಲಯದ ಕಲಾ, ವಿಜ್ಞಾನ, ವಾಣಿಜ್ಯ ಹಾಗೂ ಶಿಕ್ಷಣ ವಿಭಾಗದಲ್ಲಿ ತಲಾ ಒಂದೊಂದು ಚಿನ್ನದ ಪದಕ ದತ್ತಿ ಇಟ್ಟಿದ್ದಾರೆ. ಇಂದು ನಿವೃತ್ತಿಯಾಗುತ್ತಿರುವ ಸೋಮಣ್ಣ ಅವರ ಮುಂದಿನ ಜೀವನಕ್ಕೆ ‘ಆಲ್ ದ ಬೆಸ್ಟ್’ ಹೇಳೋಣ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...