ಬೆಂಗಳೂರು: ಗರ್ಭಕಂಠದ ಕ್ಯಾನ್ಸರ್ ತಡೆಯುವ ಉದ್ದೇಶದಿಂದ ರಾಜ್ಯದಲ್ಲಿ 9 ರಿಂದ 15 ವರ್ಷದೊಳಗಿನ 30 ಲಕ್ಷ ಬಾಲಕಿಯರಿಗೆ ಲಸಿಕೆ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ ಈ ಕುರಿತು ವರದಿ ಸಿದ್ಧಪಡಿಸುವಂತೆ ಸೂಚನೆ ನೀಡಲಾಗಿದೆ.
ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ತಡೆಯಲು ಲಸಿಕೆ ನೀಡಲಾಗುತ್ತದೆ. ಗರ್ಭಕಂಠದ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಅಂಡಾಶಯದ ಕ್ಯಾನ್ಸರ್ ಮತ್ತು ಥೈರಾಯ್ಡ್ ಕ್ಯಾನ್ಸರ್ ಕಂಡುಬರುತ್ತದೆ. ಕ್ಯಾನ್ಸರ್ ಕೋಶಗಳ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹ್ಯೂಮನ್ ಪ್ಯಾಪಿಲೋಮ ವೈರಸ್ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದ್ದು, ಈಗಾಗಲೇ ಸಿಕ್ಕಿಂನಲ್ಲಿ ಲಸಿಕೆ ವಿತರಿಸಲಾಗಿದೆ. ಇದರಿಂದ ಗರ್ಭಕಂಠದ ಲಸಿಕೆ ನಿಯಂತ್ರಣಕ್ಕೆ ಬಂದಿದೆ.
ಮೊದಲ ಲಸಿಕೆ ಪಡೆದ ಆರು ತಿಂಗಳ ನಂತರ ಎರಡನೇ ಡೋಸ್ ಪಡೆಯಬೇಕಿದೆ. ರಾಜ್ಯದಲ್ಲಿರುವ 9 ರಿಂದ 15 ವರ್ಷದೊಳಗಿನ 30 ಲಕ್ಷ ಬಾಲಕಿಯರಿಗೆ ಲಸಿಕೆ ವಿತರಿಸಲು ಸರ್ಕಾರ ಚಿಂತನೆ ನಡೆಸಿದ್ದು, ಈ ಕುರಿತಂತೆ ಯೋಜನೆ ಸಿದ್ಧಪಡಿಸಲು ಸಂಸ್ಥೆಗೆ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಸುಮಾರು 20 ಸಾವಿರ ಮಂದಿ ಗರ್ಭಕಂಠದ ಕ್ಯಾನ್ಸರ್ ತೊಂದರೆ ಎದುರಿಸುತ್ತಿದ್ದಾರೆ. ತಪಾಸಣೆ ನಡೆಸಿದಲ್ಲಿ ಇದಕ್ಕಿಂತಲೂ ಹೆಚ್ಚಿನ ಸಂಖ್ಯೆಯ ಮಹಿಳೆಯರು ಪತ್ತೆಯಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಭೆಯಲ್ಲಿ ಲಸಿಕೆ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಗಾರ್ಡಾಸಿಲ್, ಸರ್ವಾರಿಕ್ಸ್ ಕಂಪನಿಗಳು ಲಸಿಕೆ ತಯಾರಿಸಲಿದ್ದು, ಸುಮಾರು 200 ಕೋಟಿ ರೂಪಾಯಿ ಅನುದಾನ ಬೇಕಾಗಬಹುದು ಎಂದು ಹೇಳಲಾಗಿದೆ.