alex Certify BREAKING NEWS: ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಉತ್ತರ ಪ್ರದೇಶ ಸರ್ಕಾರದಿಂದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಅಲ್ಲದೇ, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ನ್ಯಾಯಾಂಗ ತನಿಖೆ ನಡೆಸಿ ಕಾಲಮಿತಿಯೊಳಗೆ ವರದಿ ನೀಡುವಂತೆ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಭಕ್ತರು ಸೇರಿ 30 ಭಕ್ತರು ಮೃತಪಟ್ಟಿದ್ದಾರೆ. 90 ಭಕ್ತರು ಗಾಯಗೊಂಡಿದ್ದಾರೆ. 1920 ಹೆಲ್ಪ್ ಲೈನ್ ನಂಬರ್ ತೆರೆಯಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...