ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಬಾವಿಯಲ್ಲಿ ಬಿದ್ದಿದ್ದ ಮೂವರು ಸಾವನ್ನಪ್ಪಿದ್ದಾರೆ. 20 ಜನರನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲಾ ಕೇಂದ್ರದಿಂದ 50 ಕಿಲೋಮೀಟರ್ ದೂರದಲ್ಲಿರುವ ಗಂಜ್ ಬಸೋದಾದಲ್ಲಿ ಈ ಘಟನೆ ನಡೆದಿದೆ.
ಬಾವಿಯಲ್ಲಿ ಬಿದ್ದಿದ್ದ ಮಗುವಿನ ರಕ್ಷಿಸಲು ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಬಾವಿಯಂಚಿನ ಮಣ್ಣು ಕುಸಿದು 35ಕ್ಕೂ ಹೆಚ್ಚು ಜನರು ಬಾವಿಗೆ ಬಿದ್ದಿದ್ದರು. ಇವರಲ್ಲಿ 11 ಜನ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆಸಲಾಗಿದೆ. NDRF ಸಿಬ್ಬಂದಿ, ಪೊಲೀಸರು ಸ್ಥಳೀಯರೊಂದಿಗೆ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.