ಬೆಂಗಳೂರು : ರಾಷ್ಟ್ರೀಯ ಹಬ್ಬಗಳ ಪಟ್ಟಿಗೆ ‘ಬುದ್ಧ ಜಯಂತಿ’ ಸೇರಿಸಲು ಸಿಎಂ ಸಿದ್ದರಾಮಯ್ಯಗೆ 30 ಸಾಹಿತಿಗಳು ಪತ್ರ ಬರೆದಿದ್ದಾರೆ.
ಡಾ.ದೇವನೂರು ಮಹಾದೇವ ಸೇರಿದಂತೆ ಸುಮಾರು 30 ಮಂದಿ ಸಾಹಿತಿಗಳು, ವಿಚಾರವಾದಿಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದಾರೆ.
ರಾಜ್ಯ ಸರ್ಕಾರ ಮಹಾವೀರ, ಕನಕದಾಸರು ಸೇರಿದಂತೆ ಹಲವು ಮಹನೀಯರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿದೆ, ಆದರೆ, ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬದ ಪಟ್ಟಿಗೆ ಸೇರಿಸದಿರುವುದು ಆಶ್ಚರ್ಯಕರವಾಗಿದೆ. ಆದ್ದರಿಂದ ರಾಷ್ಟ್ರೀಯ ಹಬ್ಬಗಳ ಪಟ್ಟಿಗೆ ‘ಬುದ್ಧ ಜಯಂತಿ’ ಯನ್ನು ಕೂಡ ಸೇರಿಸಿ ಇದರಿಂದ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಮನವಿ ಮಾಡಿದ್ದಾರೆ.