ಗ್ವಾಲಿಯರ್: ಅಕ್ರಮ ಬೆಟ್ಟಿಂಗ್ ಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ 30 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಇಂದರ್ಗಂಜ್ ಪೊಲೀಸ್ ಠಾಣೆ ಸಿಬ್ಬಂದಿ ಸೋಮವಾರ ರಾತ್ರಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿತ್ತು. ಬೆಟ್ಟಿಂಗ್ ನಲ್ಲಿ ಇವರಿಬ್ಬರ ಕೈವಾಡವಿರುವ ಶಂಕೆ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು ಎಂದು ಗ್ವಾಲಿಯರ್ನ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಮಿತ್ ಸಂಘಿ ತಿಳಿಸಿದ್ದಾರೆ.
ಹಾರುತ್ತಿದ್ದ ನವಿಲು ಬಡಿದು ಬೈಕ್ ಸವಾರ ಸಾವು….!
“ರಾತ್ರಿ 9 ರ ಸುಮಾರಿಗೆ, ಬಂಧಿತರಲ್ಲಿ ಒಬ್ಬನಾದ ಸೋನು ಬನ್ಸಾಲ್ ನೀರು ಕುಡಿದ ನಂತರ ವಾಂತಿ ಮಾಡಿಕೊಂಡಿದ್ದಾನೆ. ಕೂಡಲೇ ಆತನನ್ನು ಜಯರೋಗ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದರು.
ಈ ಹಿನ್ನೆಲೆಯಲ್ಲಿ ಇಂದರ್ಗಂಜ್ ಪೊಲೀಸ್ ಠಾಣೆಯ ಪ್ರಭಾರಿ ರಾಜೇಂದ್ರ ಪರಿಹಾರ, ಸಹಾಯಕ ಸಬ್ ಇನ್ಸ್ ಪೆಕ್ಟರ್ ಬ್ರಜ್ಲಾಲ್ ಮತ್ತು ಮೂವರು ಕಾನ್ಸ್ಟೇಬಲ್ಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.