alex Certify ಭೂಕುಸಿತದಿಂದ ಕೊಚ್ಚಿಹೋದ ರಸ್ತೆ; ಉತ್ತರಾಖಂಡದಲ್ಲಿ 300 ಪ್ರಯಾಣಿಕರ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೂಕುಸಿತದಿಂದ ಕೊಚ್ಚಿಹೋದ ರಸ್ತೆ; ಉತ್ತರಾಖಂಡದಲ್ಲಿ 300 ಪ್ರಯಾಣಿಕರ ಪರದಾಟ

ಉತ್ತರಾಖಂಡದ ಪಿಥೋರಗಢ್ ಜಿಲ್ಲೆಯಲ್ಲಿ ಭೂಕುಸಿತದಿಂದ ರಸ್ತೆ ಕೊಚ್ಚಿಹೋಗಿದ್ದು 300 ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಲಖನ್‌ಪುರ ಬಳಿ ಧಾರ್ಚುಲಾದಿಂದ ಲಿಪುಲೇಖ್-ತವಾಘಾಟ್ ರಸ್ತೆ ಕೊಚ್ಚಿಹೋದ ನಂತರ ಧಾರ್ಚುಲಾ ಮತ್ತು ಗುಂಜಿಯಲ್ಲಿ ಪ್ರಯಾಣಿಕರು ಪರದಾಡುವಂತಾಯಿತು.

ವರದಿಗಳ ಪ್ರಕಾರ, ಎರಡು ದಿನಗಳ ನಂತರ ರಸ್ತೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ.

ರಾಜ್ಯದ ಅಲ್ಮೋರಾ, ಬಾಗೇಶ್ವರ್, ಚಮೋಲಿ, ಚಂಪಾವತ್, ಡೆಹ್ರಾಡೂನ್, ಗರ್ವಾಲ್, ಹರ್ದ್ವಾರ್, ನೈನಿತಾಲ್, ಪಿಥೋರಗಢ, ರುದ್ರಪ್ರಯಾಗ, ತೆಹ್ರಿ ಗರ್ವಾಲ್, ಉಧಮ್ ಸಿಂಗ್ ನಗರ ಮತ್ತು ಉತ್ತರಕಾಶಿ ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪೊಲೀಸರು ಕೂಡ ಸೂಚನೆ ನೀಡಿದ್ದು ಎಲ್ಲಾ ಯಾತ್ರಾರ್ಥಿಗಳಿಗೆ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...