ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ ಸುಮಾರು ₹3,000 ಕೋಟಿ ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ತೆರವು ಮಾಡಲಾದ ಅರಣ್ಯ ಭೂಮಿಯಲ್ಲಿ ಸಸಿಗಳನ್ನು ನೆಡಲಾಗಿದೆ. ಈ ಮೂಲಕ ಅರಣ್ಯ ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದೇ ಒಂದು ವರ್ಷದ ಅವಧಿಯಲ್ಲಿ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ಅರಣ್ಯ ಭೂಮಿಯನ್ನು ಮರುವಶಕ್ಕೆ ಪಡೆಯಲಾಗಿದೆ. ಅಲ್ಲೆಲ್ಲಾ ಅರಣ್ಯೀಕರಣ ಚಟುವಟಿಕೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.