alex Certify GOOD NEWS : ರಾಜ್ಯ ಸರ್ಕಾರದಿಂದ ಶೀಘ್ರವೇ 3000 ಪವರ್’ಮ್ಯಾನ್ ಗಳ ನೇಮಕ : ಸಚಿವ ಕೆ.ಜೆ ಜಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯ ಸರ್ಕಾರದಿಂದ ಶೀಘ್ರವೇ 3000 ಪವರ್’ಮ್ಯಾನ್ ಗಳ ನೇಮಕ : ಸಚಿವ ಕೆ.ಜೆ ಜಾರ್ಜ್

ದಾವಣಗೆರೆ : ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇನ್ನಷ್ಟು ಗುಣಮಟ್ಟವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಸಚಿವ ಕೆ.ಜೆ ಜಾರ್ಜ್ ಹೇಳಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಇದರಲ್ಲಿ 1;5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಿ ಅಂತಿಮವಾಗಿ ಅತ್ಯಂತ ಪಾರದರ್ಶಕವಾಗಿ ಮೀಸಲಾತಿ ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕಾತಿ ನಡೆಯಲಿದೆ. ಆದರೆ ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ, ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳೊಂದಾದ ಗೃಹಜ್ಯೋತಿ ಯೋಜನೆ ಎಲ್ಲಾ ವರ್ಗದ ಜನರಿಗೂ ಅನ್ವಯಿಸಲಿದ್ದು 200 ಯುನಿಟ್ ವರೆಗೆ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ನೀಡಲಾಗುತ್ತದೆ. ಇದನ್ನು ಅವರು ವರ್ಷದಲ್ಲಿ ಉಪಯೋಗಿಸುವ ಯುನಿಟ್ಗಳನ್ನಾಧರಿಸಿ ಹೆಚ್ಚುವರಿಯಾಗಿ ಶೇ 10 ರಷ್ಟು ಸೇರಿಸಿ ಬಳಕೆಯ ಯುನಿಟ್ ನಿಗದಿಯಾಗುತ್ತದೆ. ಆದರೆ 200 ಯುನಿಟ್ ನಂತರ 1 ಯುನಿಟ್ ಹೆಚ್ಚಾದರೂ ವಿದ್ಯುತ್ ದರದಂತೆ ಬಿಲ್ ಪಾವತಿಸಬೇಕಾಗುತ್ತದೆ ಎಂದರು.

ರೈತರಿಗೆ 7 ಗಂಟೆ ವಿದ್ಯುತ್; ರೈತರ ಕೃಷಿ ಪಂಪ್ ಸೆಟ್ಗಳಿಗೆ ದಿನದಲ್ಲಿ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ದಾವಣಗೆರೆ ಜಿಲ್ಲೆ ಆನಗೋಡು, ಮಾಯಕೊಂಡ ಭಾಗದಲ್ಲಿ 3 ಅಥವಾ 4 ಗಂಟೆಗಳ ಕಾಲ ಮಾತ್ರ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ನೀಡಲಾಗುತ್ತದೆ ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿದಾಗ ಎಲ್ಲಾ ರೈತರಿಗೂ ದಿನದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸರ್ಕಾರದ ನೀತಿಯಾಗಿದ್ದು ಅದರಂತೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು. ಓವರ್ ಲೋಡಿಂಗ್ ಆದರೆ ಅದನ್ನು ಬೇರೆಡೆ ವರ್ಗಾಯಿಸಿ 7 ಗಂಟೆ ಕೃಷಿ ಪಂಪ್ಸೆಟ್ಗೆ ವಿದ್ಯುತ್ ನೀಡಲೇಬೇಕೆಂದು ಸೂಚನೆ ನೀಡಿದರು.

ಪಂಪ್ಸೆಟ್ಗಳಿಗೆ ಶೀಘ್ರ ಸಂಪರ್ಕಕ್ಕೆ ಕ್ರಮ; ರೈತರ ಕೃಷಿ ಪಂಪ್ಸೆಟ್ಗಳಿಗೆ 2004 ರಿಂದಲೂ ಅಕ್ರಮ-ಸಕ್ರಮ ಎಂಬ ಕಾರ್ಯಕ್ರಮದಡಿ ಅನಧಿಕೃತ ಸಂಪರ್ಕವನ್ನು ಸಕ್ರಮ ಮಾಡುತ್ತಾ ಬರಲಾಗಿದೆ. ಇದರಡಿ ಮೂಲಭೂತ ಸೌಕರ್ಯದಡಿ ಮಾರ್ಗ, ಟಿಸಿ ಅಳವಡಿಕೆ ಮಾಡಲಾಗಿದೆ. ಬಾಕಿ ಇರುವ 4946 ಪಂಪ್ಸೆಟ್ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್ ಕರೆಯಲಾಗಿದೆ. ರೈತರು ಸ್ವಂತವಾಗಿ ಮೂಲಭೂತ ಸೌಕರ್ಯ ಮಾಡಿಕೊಂಡು ಕೃಷಿ ಪಂಪ್ಸೆಟ್ಗಳಿಗೆ ತಕ್ಷಣವೇ ಸಂಪರ್ಕ ಪಡೆಯಲು ಹಾಗೂ ಇಲಾಖೆಯಿಂದ ಮೂಲಭೂತ ಸೌಕರ್ಯಕ್ಕಾಗಿ ಸರತಿಯಲ್ಲಿ ಕಾಯುವ ಎರಡು ಅವಕಾಶಗಳನ್ನು ಮಾಡಿಕೊಟ್ಟಲ್ಲಿ ಸ್ವಂತವಾಗಿ ಮಾಡಿಕೊಳ್ಳುವ ರೈತರಿಗೆ ಅನುಕೂಲವಾಗುತ್ತದೆ ಎಂಬ ಚಿಂತನೆ ಮಾಡಲಾಗಿದೆ ಎಂದರು.

ಕಸುಮ್-ಬಿ; ಕುಸುಮ್ ಬಿ ಯೋಜನೆಯಡಿ ರೈತರ ಪಂಪ್ಸೆಟ್ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿದೆ. 7.5 ಹೆಚ್ಪಿ ವರೆಗೆ ಅವಕಾಶ ಇದ್ದು ರೈತರು ಶೇ 20 ರಷ್ಟು ವಂತಿಗೆಯನ್ನು ಕಟ್ಟಬೇಕು. ಕೇಂದ್ರ ಶೇ 30 ಹಾಗೂ ರಾಜ್ಯ ಶೇ 50 ರಷ್ಟು ಸಹಾಯಧನ ಘಟಕ ವೆಚ್ಚಕ್ಕೆ ನೀಡಲಿದೆ. ಮತ್ತು ಕುಸುಮ್-ಸಿ ಯೋಜನೆಯಡಿ ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಗ್ರಿಡ್ಗೆ ಪೂರೈಕೆ ಮಾಡುವುದಾಗಿದೆ. ರೈತರು ಸೋಲಾರ್ ಪಂಪ್ಸೆಟ್ ಅಳವಡಿಕೆಗೆ ಮುಂದೆ ಬಂದಲ್ಲಿ ಹೆಚ್ಚು ಅನುಕೂಲವಾಗಲಿದೆ ಎಂದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Optická ilúzia: Odhaľte svoju skrytú silu v Optický klam pre Rozhodnite sa rýchlo: