
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಕಾನ್ ಸ್ಟೆಬಲ್ 3064 ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ.
3064 ಸಶಸ್ತ್ರ ಕಾನ್ ಸ್ಟೆಬಲ್ ನೇಮಕಾತಿಗೆ ಜನವರಿ 28 ರಂದು ಲಿಖಿತ ಪರೀಕ್ಷೆ ನಡೆಸಲು ಪೊಲೀಸ್ ನೇಮಕಾತಿ ವಿಭಾಗ ನಿರ್ಧರಿಸಿದ್ದು, ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸಲು ಎಲ್ಲ ಘಟಕಗಳಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚನೆ ನೀಡಿದೆ.
ನವೆಂಬರ್ 8 ರ ಒಳಗಾಗಿ ಪರೀಕ್ಷಾ ಕೇಂದ್ರಗಳ ವಿವರಗಳನ್ನು ಕಳುಹಿಸುವಂತೆ ಎಲ್ಲ ಘಟಕ ಮುಖ್ಯಸ್ಥರಿಗೆ ಪೊಲೀಸ್ ನೇಮಕಾತಿ ವಿಭಾಗ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೂಚನೆ ನೀಡಿದ್ದಾರೆ.