ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿರುವ ಖ್ಯಾತ ನಟ ಕಿಚ್ಚ ಸುದೀಪ್, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋ ಶಾಲೆಗಳಲ್ಲಿ ತಲಾ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುವುದಾಗಿ ತಿಳಿಸಿದ್ದಾರೆ
ಗುರುವಾರದಂದು ಪಶು ಸಂಗೋಪನೆ ಸಚಿವ ಪ್ರಭು ಬಿ. ಚೌಹಾಣ್ ಅವರ ನಿವಾಸದಲ್ಲಿ ಗೋಪೂಜೆ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ವಿಷಯ ಹೇಳಿದ್ದಾರೆ.
ಅಲ್ಲದೆ ತಮ್ಮನ್ನು ಪುಣ್ಯಕೋಟಿ ದತ್ತು ಯೋಜನೆ ರಾಯಭಾರಿಯನ್ನಾಗಿ ಮಾಡುವ ಮೂಲಕ ಸರ್ಕಾರ ಜವಾಬ್ದಾರಿಯನ್ನು ಹೆಚ್ಚಿಸಿದ್ದು, ಸಾರ್ವಜನಿಕರು, ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.