
ಕಳೆದ ವರ್ಷ ಅಮೆರಿಕದಲ್ಲಿ ಆಘಾತಕಾರಿ ಪ್ರಕರಣ ಒಂದು ಬೆಳಕಿಗೆ ಬಂದಿದ್ದು, 31 ವರ್ಷದ ಮಹಿಳೆಯೊಬ್ಬಳು 13 ವರ್ಷದ ಬಾಲಕನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಳು. ಇದರ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದು ಮಹಿಳೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.
ಮಹಿಳೆ ಪೊಲೀಸ್ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ಈಗ ಮಗುವಿಗೆ ಜನ್ಮ ನೀಡಿದ್ದು, ಹೀಗಾಗಿ ಆಕೆಯನ್ನು ಜೈಲಿಗೆ ಕಳುಹಿಸುವ ಬದಲು ಈಗಾಗಲೇ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ಅಡಿ ವಿಚಾರಣೆ ಮುಂದುವರೆಸಲು ನಿರ್ಧರಿಸಲಾಗಿದೆ.
ಇದಕ್ಕೆ ಬಾಲಕನ ತಾಯಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮಹಿಳೆ ತನ್ನ ಈ ಕೃತ್ಯದಿಂದ ನನ್ನ ಮಗನ ಬಾಲ್ಯವನ್ನೇ ನಾಶಪಡಿಸಿದ್ದಾಳೆ. ಆತ ಈ ಘಟನೆ ಬಳಿಕ ಮಾನಸಿಕವಾಗಿ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದಾನೆ. ಹೀಗಾಗಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.