ನವದೆಹಲಿ: ರಾಜ್ಯದ ಇಬ್ಬರು ಬಾಲಕರು ಸೇರಿದಂತೆ 32 ಮಕ್ಕಳಿಗೆ ಕೇಂದ್ರ ಸರ್ಕಾರ ನೀಡುವ 2021 ನೇ ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ನೀಡಲಾಗಿದೆ.
ದಕ್ಷಿಣಕನ್ನಡದ ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಅವರಿಗೆ ಒಂದು ಲಕ್ಷ ರೂಪಾಯಿ ನಗದು ಸಹಿತ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ರಾಕೇಶ್ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದವರಾಗಿದ್ದಾರೆ. ವಿವೇಕಾನಂದ ಶಾಲೆ ವಿದ್ಯಾರ್ಥಿಯಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ವೀರ್ ಕಶ್ಯಪ್ ಕೊಚ್ಚಿ ನೇವಿ ಚಿಲ್ಡ್ರನ್ ಸ್ಕೂಲ್ನಲ್ಲಿ 5ನೇ ತರಗತಿ ಓದುತ್ತಿದ್ದಾರೆ.