ಬೆಂಗಳೂರು : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ ಪಡೆದು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದರು. ಈ ಮೂಲಕ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ಅರಣ್ಯನಾಶ, ಕಾಡು ಪ್ರಾಣಿಗಳ ಸಾವು ಹಾಗೂ ಮಾನವ-ಮೃಗ ಸಂಘರ್ಷದ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಈ ನಿಟ್ಟಿನಲ್ಲಿ ನಾವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಈ ಸಂಬಂಧ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಇದುವರೆಗೆ 117 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರು : ಬೆಂಗಳೂರಿನ ಪೊಲೀಸರು ನಗರದ ವಿವಿಧೆಡೆ ಭರ್ಜರಿ ಕಾರ್ಯಾಚರಣೆ ನಡೆಸಿ ಇದುವರೆಗೆ ಬರೋಬ್ಬರಿ 117 ಕೋಟಿ ರೂ. ಮೌಲ್ಯದ 6261 ಕೆ.ಜಿ ಮಾದಕ ವಸ್ತು ಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ
ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು 6191 ಪ್ರಕರಣಗಳನ್ನು ದಾಖಲಿಸಿ, 117 ಕೋಟಿ ರೂ. ಮೌಲ್ಯದ 6261 ಕೆ.ಜಿ ಮಾದಕ ವಸ್ತು ಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಪ್ರಕರಣಗಳಲ್ಲಿ 7723 ಭಾರತೀಯರು ಮತ್ತು 159 ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.ಡ್ರಗ್ ಪೆಡ್ಡರ್ ಗಳ ಮೇಲೆ 943 ಪ್ರಕರಣ ಹಾಗೂ ಡ್ರಗ್ ಸೇವನೆ ಮಾಡುವವರ ವಿರುದ್ಧ 5248 ಪ್ರಕರಣ ದಾಖಲಿಸಲಾಗಿದೆ
ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರುದ್ಧ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. 388 ಶಾಲೆಗಳು ಹಾಗೂ 253 ಕಾಲೇಜುಗಳಿಗೆ ಭೇಟಿ ನೀಡಿದ ಪೊಲೀಸರು ವಿದ್ಯಾರ್ಥಿಗಳಿಗೆ ಮಾದಕ ವಸ್ತು ದ್ರವ್ಯಗಳ ಈ ಸೇವನೆಯಿಂದ ಆಗುವ ಹಾನಿ ಬಗ್ಗೆ ಅರಿವು ಮೂಡಿಸಿದ್ದಾರೆ.