alex Certify ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 343 ಕೋಟಿ ರೂ. ಅನುದಾನ ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 343 ಕೋಟಿ ರೂ. ಅನುದಾನ ಮಂಜೂರು

ನವದೆಹಲಿ: ಮಂಗಳೂರು -ತುಮಕೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ 10.8 ಕಿಲೋಮೀಟರ್ ದ್ವಿಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 343.74 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.

ಕೇಂದ್ರ ರಸ್ತೆ, ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಾರ್ಮಾಡಿ ಹಳ್ಳದಿಂದ ಘಾಟಿಯ 11ನೇ ತಿರುವಿನ ವರೆಗೆ 10.8 ಕಿಲೋಮೀಟರ್ ವ್ಯಾಪ್ತಿಯ ರಸ್ತೆ 343 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಚಾರ್ಮಾಡಿ ಘಾಟಿ ದಕ್ಷಿಣ ಕನ್ನಡ -ಚಿಕ್ಕಮಗಳೂರು ಜಿಲ್ಲೆಗಳ 25 ಕಿಲೋಮೀಟರ್ ವ್ಯಾಪ್ತಿ ಹೊಂದಿದ್ದು, ಇದರಲ್ಲಿ ದಕ್ಷಿಣ ಕನ್ನಡ ವಿಭಾಗದ 10.8 ಕಿಲೋಮೀಟರ್ ರಸ್ತೆ ಅಭಿವೃದ್ಧಿಪಡಿಸಲಾಗುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...