
ಗುಜರಾತ್‌ನ ಭರೂಚ್‌ನ ಜಿಲ್ಲಾಧಿಕಾರಿ ತುಷಾರ್ ಡಿ ಸುಮೇರಾ ತಮ್ಮ 10 ನೇ ತರಗತಿಯ ಬೋರ್ಡ್ ಫಲಿತಾಂಶ ಬಹಿರಂಗ ಪಡಿಸಿದ್ದಾರೆ. ಅವರು ಇಂಗ್ಲಿಷ್‌ನಲ್ಲಿ 35 ಮತ್ತು ಗಣಿತದಲ್ಲಿ 36 ಅಂಕಗಳನ್ನು ಪಡೆದಿದ್ದರು.
ಛತ್ತೀಸ್‌ಗಢ ಕೇಡರ್‌ನ 2009 ರ ಬ್ಯಾಚ್ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ರಿಪೋರ್ಟ್ ಕಾರ್ಡ್ ಜೊತೆಗೆ ಸುಮೇರಾ ಅವರ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ತುಷಾರ್ ಸುಮೇರಾ ಮೈಕ್ರೋ-ಬ್ಲಾಗಿಂಗ್ ಸೈಟ್‌ನಲ್ಲಿ ಶ್ರೀ ಶರಣ್ ಅವರಿಗೆ ಕೃತಜ್ಞತಾ ಪತ್ರವನ್ನು ಬರೆದಿದ್ದಾರೆ. ತುಷಾರ್ ಸುಮೇರಾ 2012 ರಲ್ಲಿ ಐಎಎಸ್ ಅಧಿಕಾರಿಯಾದರು.
ಅವರು ಆರ್ಟ್ಸ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದರು. ಅದಕ್ಕೂ ಮುನ್ನ ಶಾಲಾ ಶಿಕ್ಷಕರಾಗಿ ಕೆಲಸ ಮಾಡಿದ್ದರು.