alex Certify ಐಎಎಸ್ ಅಧಿಕಾರಿ ಅಂಕಪಟ್ಟಿ ವೈರಲ್; ಹತ್ತನೇ ತರಗತಿಯಲ್ಲಿ ಇಂಗ್ಲಿಷ್‌ನಲ್ಲಿ 35, ಗಣಿತದಲ್ಲಿ 36 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಎಎಸ್ ಅಧಿಕಾರಿ ಅಂಕಪಟ್ಟಿ ವೈರಲ್; ಹತ್ತನೇ ತರಗತಿಯಲ್ಲಿ ಇಂಗ್ಲಿಷ್‌ನಲ್ಲಿ 35, ಗಣಿತದಲ್ಲಿ 36

ಬೋರ್ಡ್ ಪರೀಕ್ಷೆ ಫಲಿತಾಂಶಗಳಿಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಐಎಎಸ್ ಅಧಿಕಾರಿಯೊಬ್ಬರು ತಮ್ಮ 10 ನೇ ತರಗತಿಯ ಅಂಕಪಟ್ಟಿಯನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಗುಜರಾತ್‌ನ ಭರೂಚ್‌ನ ಜಿಲ್ಲಾಧಿಕಾರಿ ತುಷಾರ್ ಡಿ ಸುಮೇರಾ ತಮ್ಮ 10 ನೇ ತರಗತಿಯ ಬೋರ್ಡ್ ಫಲಿತಾಂಶ ಬಹಿರಂಗ ಪಡಿಸಿದ್ದಾರೆ. ಅವರು ಇಂಗ್ಲಿಷ್‌ನಲ್ಲಿ 35 ಮತ್ತು ಗಣಿತದಲ್ಲಿ 36 ಅಂಕಗಳನ್ನು ಪಡೆದಿದ್ದರು.

ಛತ್ತೀಸ್‌ಗಢ ಕೇಡರ್‌ನ 2009 ರ ಬ್ಯಾಚ್ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ರಿಪೋರ್ಟ್ ಕಾರ್ಡ್ ಜೊತೆಗೆ ಸುಮೇರಾ ಅವರ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ತುಷಾರ್ ಸುಮೇರಾ ಮೈಕ್ರೋ-ಬ್ಲಾಗಿಂಗ್ ಸೈಟ್‌ನಲ್ಲಿ ಶ್ರೀ ಶರಣ್ ಅವರಿಗೆ ಕೃತಜ್ಞತಾ ಪತ್ರವನ್ನು ಬರೆದಿದ್ದಾರೆ. ತುಷಾರ್ ಸುಮೇರಾ 2012 ರಲ್ಲಿ ಐಎಎಸ್ ಅಧಿಕಾರಿಯಾದರು.

ಅವರು ಆರ್ಟ್ಸ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದರು. ಅದಕ್ಕೂ‌ ಮುನ್ನ ಶಾಲಾ ಶಿಕ್ಷಕರಾಗಿ ಕೆಲಸ ಮಾಡಿದ್ದರು.

— Awanish Sharan (@AwanishSharan) June 11, 2022

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...