ಬೆಂಗಳೂರು: 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ಸಿಂಧುಗೊಳಿಸಿ ನೇಮಕಾತಿ ಆದೇಶ ನೀಡಲು ತರಲಾದ ಕಾಯ್ದೆಯನ್ನು ಪ್ರಶ್ನಿಸಿದ್ದ ಪಿ ಐ ಎಲ್ ನ್ನು ಹೈಕೋರ್ಟ್ ವಜಾಗೊಳಿಸಿದೆ.
2011ನೇ ಸಾಲಿನ ಕೆಪಿಎಸ್ ಸಿ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ತರಲಾದ ಕಾಯ್ದೆ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಅರೀಫ್ ಜಮಾಲ್ ಪಿ ಐ ಎಲ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಋತುರಾಜ್ ಅವಸ್ಥಿ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ, ಅರ್ಜಿ ವಜಾಗೊಳಿಸಿದೆ.
2011ನೇ ಸಾಲಿನ ನೇಮಕಾತಿಯನ್ನೇ ಹೈಕೋರ್ಟ್ ರದ್ದು ಪಡಿಸಿದೆ ಎಂಬ ಕಾರಣಕ್ಕೆ ಇಡೀ ಕಾಯ್ದೆಯನ್ನು ಅಸಂವಿಧಾನಿಕ ಎನ್ನಲಾಗದು. ಕಾಯ್ದೆಯಲ್ಲಿ ಯಾವ ನಿಯಮ ಅಸಂವಿಧಾನಿಕ ಎಂಬುದನ್ನು ಅರ್ಜಿದಾರರು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿ ಅರ್ಜಿ ವಜಾಗೊಳಿಸಿದೆ.