alex Certify ಇಂದು 3 ನೇ ಗ್ಯಾರಂಟಿ ಆರಂಭ : ಅನ್ನಭಾಗ್ಯ ಯೋಜನೆಯಡಿ ಪಡಿತರದಾರರ ಖಾತೆಗೆ ಹಣ ಜಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು 3 ನೇ ಗ್ಯಾರಂಟಿ ಆರಂಭ : ಅನ್ನಭಾಗ್ಯ ಯೋಜನೆಯಡಿ ಪಡಿತರದಾರರ ಖಾತೆಗೆ ಹಣ ಜಮಾ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣ ವರ್ಗಾವಣೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬದ ಸದಸ್ಯರಿಗೆ ಪ್ರಸ್ತುತ ವಿತರಿಸುತ್ತಿರುವ 5 ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ನೀಡುವುದಾಗಿ ಹೇಳಲಾಗಿತ್ತು. ಅಕ್ಕಿ ಲಭ್ಯವಾಗದ ಕಾರಣ ಪ್ರತಿ ವ್ಯಕ್ತಿಗೆ ತಿಂಗಳಿಗೆ 170 ರೂ. ಗಳಂತೆ ಕುಟುಂಬ ಸದಸ್ಯರ ಖಾತೆಗೆ ಹಣ ಜಮಾ ಆಗಲಿದೆ.

ಯಾರ ಖಾತೆಗೆ ಹಣ ಜಮಾ ಆಗುತ್ತೆ?

ರಾಜ್ಯದ ಬಿಪಿಎಲ್, 4 ಕ್ಕಿಂತ ಹೆಚ್ಚು ಜನರಿರುವ ಅಂತ್ಯೋದಯ ಕುಟುಂಬದ ಸದಸ್ಯರಿಗೆ ಹಣ ಜಮಾ ಆಗಲಿದೆ.

ಆಧಾರ್ ಲಿಂಗ್ ಮಾಡಿಸಿ ಸಕ್ರಿಯ ಬ್ಯಾಂಕ್ ಖಾತೆ ಹೊಂದಿದವರು

ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು ಸೂಚಿಸಿದವರ ಖಾತೆಗೆ ಹಣ ಜಮಾ ಆಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...