alex Certify ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ : ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ : ನಾಲ್ವರು ಸಾವು

ಮಥುರಾ ಜಿಲ್ಲೆಯ ಯಮುನಾ ಎಕ್ಸ್​ಪ್ರೆಸ್​ ಹೆದ್ದಾರಿ ಬಳಿ ಪಿಕಪ್​ ಟ್ರಕ್ ಟ್ರ್ಯಾಕ್ಟರ್​ಗೆ​ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸುರಿರ್​ ಪೊಲೀಸ್​ ಠಾಣಾ ವ್ಯಾಪ್ತಿಯ ಯುಮುನಾ ಎಕ್ಸ್​ಪ್ರೆಸ್​ ವೇನ ಟೆಂಟಿಗಾಂವ್​ ಅಂಡರ್​ಪಾಸ್​ ಬಳಿ ಈ ಘಟನೆ ನಡೆದಿದೆ.

ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಅಂತಾ ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ . ಒಂದು ಡಜನ್​ಗೂ ಅಧಿಕ ಮಂದಿಯನ್ನ ತುಂಬಿಕೊಂಡಿದ್ದ ಟ್ರಕ್​​ ಇಟ್ಟಿಗೆ ತುಂಬಿದ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...