ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಶೋರೂಂನಲ್ಲಿ ಸೋಮವಾರ ಭಾರೀ ಬೆಂಕಿ ಕಾಣಿಸಿಕೊಂಡು ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ಝಾನ್ಸಿಯ ಸಿಪ್ರಿ ಬಜಾರ್ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಎಲೆಕ್ಟ್ರಾನಿಕ್ಸ್ ಶೋರೂಂ ಮತ್ತು ಕ್ರೀಡಾ ಅಂಗಡಿಗೆ ಬೆಂಕಿ ಆವರಿಸಿದೆ. ಪೊಲೀಸರು ಅಗ್ನಿಶಾಮಕ ದಳದೊಂದಿಗೆ ಸುಮಾರು 10 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೂವರು ಸಜೀವ ದಹನವಾಗಿದ್ದು, ಮತ್ತೊಬ್ಬ ಮಹಿಳೆ ಚಿಕಿತ್ಸೆ ವೇಳೆ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.