alex Certify BIG NEWS : ಶಂಕಿತ ಉಗ್ರ ಜಾಹಿದ್ ತಬ್ರೇಜ್ ನಿವಾಸದಲ್ಲಿ 4 ಗ್ರೆನೇಡ್ ಗಳು ಪತ್ತೆ : ಸಿಸಿಬಿ ಜಂಟಿ ಆಯುಕ್ತ ಶರಣಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶಂಕಿತ ಉಗ್ರ ಜಾಹಿದ್ ತಬ್ರೇಜ್ ನಿವಾಸದಲ್ಲಿ 4 ಗ್ರೆನೇಡ್ ಗಳು ಪತ್ತೆ : ಸಿಸಿಬಿ ಜಂಟಿ ಆಯುಕ್ತ ಶರಣಪ್ಪ

ಬೆಂಗಳೂರು : ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ.

ಶಂಕಿತ ಉಗ್ರ ಜಾಹಿದ್ ತಬ್ರೇಜ್ ನಿವಾಸದಲ್ಲಿ 4 ಗ್ರೆನೇಡ್ಗಳು ಪತ್ತೆಯಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಹೇಳಿದ್ದಾರೆ.  ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ  ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ನಿವಾಸದಲ್ಲಿ ಕೆಮಿಕಲ್ ಹಾಗೂ ಮರಳು ತುಂಬಿದ್ದ ಚೀಲದಲ್ಲಿ ಗ್ರೆನೇಡ್ ಪತ್ತೆಯಾಗಿದೆ. ಬಂಧಿತ  5 ನೇ ಆರೋಪಿ ಜಾಹಿದ್ ತಬ್ರೇಜ್ ಮನೆಯ ಬೀರುವಿನಲ್ಲಿ ಗ್ರೆನೇಡ್ ಪತ್ತೆಯಾಗಿದೆ. ಸದ್ಯ ಅದನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಹೇಳಿದ್ದಾರೆ.  5  ಮಂದಿ  ಆರೋಪಿಗಳನ್ನು ಬಂಧಿಸಿ  ವಿಚಾರಣೆ ನಡೆಸಲಾಗುತ್ತಿದ್ದು,  ಅವರಿಂದ ಹೇಳಿಕೆಗಳನ್ನ ಪಡೆಯಲಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಎನ್ ಐ ಎ ವಿಶೇಷ ಕೋರ್ಟ್ ಐವರು ಶಂಕಿತ ಉಗ್ರರನ್ನು ಏಳು ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. 15 ದಿನ ತಮ್ಮ ವಶಕ್ಕೆ ನೀಡುವಂತೆ ಸಿಸಿಬಿ ಮನವಿ ಮಾಡಿಕೊಂಡಿತ್ತು, ಆದರೆ ಕೋರ್ಟ್ 7 ದಿನ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಬೆಂಗಳೂರಿನ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 7 ಶಂಕಿತ ಉಗ್ರರ ಪೈಕಿ ಐವರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಆರೋಪಿ ನಂಬರ್-1 ನಜೀರ್ ಹಾಗೂ ಆರೋಪಿ ನಂಬರ್ 2 ಸದ್ಯ ಪರಾರಿಯಾಗಿದ್ದು, 3 ಸುಹೇಲ್, 4 ಉಮರ್, 5, ಜಾಹೀದ್, 6 ಮುದಾಸಿರ್, ಫೈಜಲ್ ಆರೆಸ್ಟ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...