ಮುಂಬೈ: ಮಹಾರಾಷ್ಟ್ರದ ರಾಯ್ ಗಢದಲ್ಲಿ ಆಟೋ ಮೇಲೆ ಟಿಪ್ಪರ್ ಪಲ್ಟಿಯಾಗಿ ಪರೀಕ್ಷೆ ಮುಗಿಸಿ ಹಿಂತಿರುಗುತ್ತಿದ್ದ 3 ವಿದ್ಯಾರ್ಥಿಗಳು ಸೇರಿದಂತೆ 4 ಮಂದಿ ಸಾವುಕಂಡಿದ್ದಾರೆ.
ಸಂತ್ರಸ್ತರಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದ್ದು, ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದರು. ಆಟೋ ಚಾಲಕ ಸೇರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಘೋಷಿಸಿದ್ದಾರೆ ಎಂದು ರಾಯಗಢ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಕೈಗಾರಿಕಾ ಸಚಿವ ಉದಯ್ ಸಾಮಂತ್ ತಿಳಿಸಿದ್ದಾರೆ.