alex Certify ಆಟೋಗೆ ಮರಳು ತುಂಬಿದ್ದ ಟ್ರಕ್ ಡಿಕ್ಕಿ: 3 ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟೋಗೆ ಮರಳು ತುಂಬಿದ್ದ ಟ್ರಕ್ ಡಿಕ್ಕಿ: 3 ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವು

ಮುಂಬೈ: ಮಹಾರಾಷ್ಟ್ರದ ರಾಯ್‌ ಗಢದಲ್ಲಿ ಆಟೋ ಮೇಲೆ ಟಿಪ್ಪರ್ ಪಲ್ಟಿಯಾಗಿ ಪರೀಕ್ಷೆ ಮುಗಿಸಿ ಹಿಂತಿರುಗುತ್ತಿದ್ದ 3 ವಿದ್ಯಾರ್ಥಿಗಳು ಸೇರಿದಂತೆ 4 ಮಂದಿ ಸಾವುಕಂಡಿದ್ದಾರೆ.

ಸಂತ್ರಸ್ತರಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದ್ದು, ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದರು. ಆಟೋ ಚಾಲಕ ಸೇರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಘೋಷಿಸಿದ್ದಾರೆ ಎಂದು ರಾಯಗಢ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಕೈಗಾರಿಕಾ ಸಚಿವ ಉದಯ್ ಸಾಮಂತ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...