ಉತ್ತರ ಪ್ರದೇಶದ ನೋಯ್ಡಾದಲ್ಲಿ ಅಪಾರ್ಟ್ಮೆಂಟ್ ಕಟ್ಟಡದ ಆವರಣ ಗೋಡೆ ಕುಸಿದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ನಿರ್ಮಾಣ ಹಂತದ ಕಟ್ಟಡದ ಗೋಡೆ ಇದು ಎನ್ನಲಾಗಿದ್ದು, ಗೋಡೆ ಕುಸಿದ ವೇಳೆ ಅದರಲ್ಲಿ ಕಾರ್ಮಿಕರು ಸಿಲುಕಿದ್ದಾರೆ. ಕೂಡಲೇ ಬುಲ್ಡೋಜರ್ ಮೂಲಕ ಅವಶೇಷ ತೆರವುಗೊಳಿಸಲಾಯಿತಾದರೂ ಅಷ್ಟರಲ್ಲಾಗಲೇ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು.
ಗಾಯಗೊಂಡ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನಷ್ಟು ಮಂದಿ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ.