
ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಒಂದು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ಮತದಾರರ ತೀರ್ಪು ಒಪ್ಪಿಕೊಳ್ಳುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದೆ. ಚುನಾವಣಾ ಫಲಿತಾಂಶ ಬೆನ್ನಲ್ಲೇ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮತದಾರರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ ಎಂದಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ತೆಲಂಗಾಣ ಜನರಿಗೆ ಧನ್ಯವಾದ ಎಂದು ತಿಳಿಸಿದ್ದಾರೆ.