
ನವದೆಹಲಿ: ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಹೇಳಲಾಗುತ್ತಿದೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಬರದಿಂದ ಸಾಗಿದ್ದು, ಮಧ್ಯಪ್ರದೇಶ ರಾಜಸ್ಥಾನಗಳಲ್ಲಿ ಬಿಜೆಪಿ ಭಾರಿ ಮುನ್ನಡೆಯಲಿದೆ. ಛತ್ತೀಸ್ ಗಢದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶ ಬಹುತೇಕ ನಿಚ್ಚಳವಾಗಲಿದೆ.
ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇಂದು ಸಂಜೆ 5 ಗಂಟೆಗೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.