alex Certify BIG NEWS: 4 ರಾಜ್ಯಗಳ ಚುನಾವಣಾ ಫಲಿತಾಂಶ; ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಮುನ್ನಡೆ; ಸದ್ಯದ ಟ್ರೆಂಡ್ ಹೀಗಿದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 4 ರಾಜ್ಯಗಳ ಚುನಾವಣಾ ಫಲಿತಾಂಶ; ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಮುನ್ನಡೆ; ಸದ್ಯದ ಟ್ರೆಂಡ್ ಹೀಗಿದೆ

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಕೆಲವೇ ಹೊತ್ತಲ್ಲಿ ಮತ ಎಣಿಕೆ ಮುಕ್ತಾಯಗೊಳ್ಳಲಿದೆ. ಯಾವ ರಾಜ್ಯಗಳಲ್ಲಿ ಯಾವ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ ಗಢದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, ಅಧಿಕರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿ 164 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಹಾಗೂ ಇತರೆ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.

ರಾಜಸ್ಥಾನದಲ್ಲಿ ಬಿಜೆಪಿ 115 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 71 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಇತರೆ 13 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.

ಛತ್ತೀಸ್ ಗಢದಲ್ಲಿ ಬಿಜೆಪಿ 55 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ 33 ಹಾಗೂ ಇತರೆ 2 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ಸಂಖ್ಯೆ 46.

ತೆಲಂಗಾಣದಲ್ಲಿ ಕಾಂಗ್ರೆಸ್ 69 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಆರ್ ಎಸ್ 35 ಕ್ಷೇತ್ರಗಳಲ್ಲಿ, ಬಿಜೆಪಿ 9 ಕ್ಷೇತ್ರಗಳಲ್ಲಿ ಎಐಎಂಐಎಂ 6 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ ಗಢದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡಿದ್ದು, ಅಧಿಕಾರಕ್ಕೇರುವುದು ಖಚಿತವಾಗಿದೆ. ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...