ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಅಕ್ರಮ ಜೋರಾಗಿದೆ. ಚುನಾವಣಾ ಆಯೋಗದ ಪ್ರಕಾರ ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ವಸೂಲಿ ಮಾಡಿದ್ದಕ್ಕಿಂತ 4.5 ಪಟ್ಟು ಹೆಚ್ಚು ಅಕ್ರಮ ವಸ್ತುಗಳು ಸೇರಿದಂತೆ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳವಾರ ಚುನಾವಣಾ ಆಯೋಗವು ನೀಡಿರುವ ಅಧಿಕೃತ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಆಯೋಗವು 375 ಕೋಟಿ ರೂಪಾಯಿ ಮೌಲ್ಯದ ಮದ್ಯ, ಡ್ರಗ್ಸ್ ಮತ್ತು ಉಚಿತ ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಹೇಳಿದೆ.
ಇದು ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ವಸೂಲಿ ಮಾಡಿದ್ದಕ್ಕಿಂತ 4.5 ಪಟ್ಟು ಹೆಚ್ಚು.
ಸೀರೆಗಳು, ಆಹಾರ ಕಿಟ್‌ಗಳು, ಪ್ರೆಶರ್ ಕುಕ್ಕರ್‌ಗಳು ಮತ್ತು ಅಡುಗೆ ಸಲಕರಣೆಗಳಂತಹ ಉಚಿತ ಉಡುಗೊರೆಗಳು ಇದರಲ್ಲಿ ಸೇರಿವೆ.
ರಾಜ್ಯದಲ್ಲಿ ಮಾರ್ಚ್ 29ರಂದು ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ಜಾರಿ ನಿರ್ದೇಶನಾಲಯ 288 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದೆ. ಚುನಾವಣಾ ಸಮಿತಿಯು 81 ವಿಧಾನಸಭಾ ಸ್ಥಾನಗಳನ್ನು ಸೂಕ್ಷ್ಮ ಕ್ಷೇತ್ರಗಳೆಂದು ಗುರುತಿಸಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದಲ್ಲಿ 4.04 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದಿಂದ ಗುಪ್ತಚರ ಮತ್ತು ಟ್ರಯಲ್ ಮ್ಯಾಪಿಂಗ್ ಬಳಸಿ ಹೈದರಾಬಾದ್‌ನಲ್ಲಿ ಅಕ್ರಮವಾಗಿ ಅಲ್ಪ್ರಜೋಲಂ ತಯಾರಿಸುತ್ತಿದ್ದ ಪ್ರಯೋಗಾಲಯದ ಮೇಲೆ ದಾಳಿ ಮಾಡಲಾಗಿದೆ. ಬೀದರ್ ಜಿಲ್ಲೆಯಲ್ಲಿ 100 ಕೆಜಿ ಗಾಂಜಾ ವಶಪಡಿಸಿಕೊಂಡಿರುವುದು ಗಮನಾರ್ಹವಾಗಿದೆ ಎಂದು ಚುನಾವಣಾ ಸಮಿತಿ ಹೇಳಿದೆ. ಎಲ್ಲಾ ಜಿಲ್ಲೆಗಳಿಂದ ಮದ್ಯ ವಶಪಡಿಸಿಕೊಳ್ಳಲಾಗಿದೆ.
ಅತಿ ಹೆಚ್ಚಿನ ಪ್ರಮಾಣದಲ್ಲಿ ಕಲಬುರಗಿ, ಚಿಕ್ಕಮಗಳೂರು ಮತ್ತು ಇತರ ಜಿಲ್ಲೆಗಳಿಂದ ಸೀರೆಗಳು ಮತ್ತು ಆಹಾರ ಕಿಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಲಹೊಂಗಲ ಮತ್ತು ಕುಣಿಗಲ್ ಮತ್ತು ಇತರ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರೆಶರ್ ಕುಕ್ಕರ್ ಮತ್ತು ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
2018 ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ರಾಜ್ಯದಲ್ಲಿ ಅಕ್ರಮ ಪ್ರಕರಣಗಳು ದಾಖಲೆ ಪ್ರಮಾಣದಲ್ಲಿ ಹೆಚ್ಚಿದ್ದು, ಕಳೆದ ಬಾರಿಯ ಚುನಾವಣೆಗಿಂತ 4.5 ಪಟ್ಟು ಹೆಚ್ಚಾಗಿದೆ