
ವಿಜಯನಗರ: ಮಕ್ಕಳ ಬಗ್ಗೆ ಪೋಷಕರು ಎಷ್ಟೇ ಎಚ್ಚರವಹಿಸಿದರೂ ಕಡಿಮೆಯೇ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಚರಂಡಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಅನಂತಶಯನ ಬಡಾವಣೆಯಲ್ಲಿ ನಡೆದಿದೆ.
4 ವರ್ಷದ ವಿರಾಟ್ ಮೃತ ಬಾಲಕ. ಮನೆಯ ಬಳಿಯ ಖಾಲಿ ಸೈಟ್ ನಲ್ಲಿ ಚರಂಡಿ ನೀರು ನಿಂತಿತ್ತು. ಆಟವಾಡಲೆಂದು ಹೋದ ಬಾಲಕ ಕಾಲುಜಾರಿ ಚರಂಡಿ ನೀರಿಗೆ ಬಿದ್ದಿದ್ದಾನೆ. ತಕ್ಷಣ ಬಾಲಕನ್ನು ಮೇಲಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಆಸ್ಪತ್ರೆಗೆ ದೌಡಾಯಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಪಟ್ಟಣದಲ್ಲಿ ಚರಂಡಿ ನೀರು ನಿಲ್ಲದಂತೆ ಗುಂಡಿಗಳನ್ನು ಮುಚ್ಚುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.