h seಬೆಂಗಳೂರು : ಬಿಲ್ಡರ್ ಸಂತೋಷ್ ಮನೆಯಲ್ಲಿ 40 ಕೋಟಿ ಸಿಕ್ಕಿದ್ದು ಸುಳ್ಳು ಎಂದು ಬಿಲ್ಡರ್ ಸಂತೋಷ್ ಸಹೋದರ ದೈವಿಕ್ ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮ ಮನೆಯಲ್ಲಿ 40 ಕೋಟಿಗೂ ಅಧಿಕ ಹಣ ಪತ್ತೆ ಎನ್ನುವುದು ಸುಳ್ಳು. ಯಾರೋ ಆಗದವರು ಇಂತಹ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಐಟಿ ಅಧಿಕಾರಿಗಳು ನಮ್ಮ ಮನೆಗೆ ದಾಳಿ ಮಾಡಿದ್ದು ನಿಜ. ದಾಳಿ ಮಾಡಿ ಮನೆಯನ್ನು ಸಂಪೂರ್ಣ ಹುಡುಕಾಡಿದ್ದಾರೆ. ಆದರೆ ಹಣ ಪತ್ತೆಯಾಗಿಲ್ಲ ಎಂದರು.
ದಾಳಿ ನಡೆಸಿದ ಅಧಿಕಾರಿಗಳು ಕೆಲವು ದಾಖಲೆಗಳು, ಬ್ಯಾಂಕ್ ಮಾಹಿತಿ, ಟ್ರಾನ್ಸ್ಯಾಕ್ಷನ್ ದಾಖಲೆ ತೆಗೆದುಕೊಂಡು ಹೊಗಿದ್ದಾರೆ. ನಾವು ರಾಜಕೀಯ ಹಿನ್ನಲೆ ಉಳ್ಳವರಲ್, ಬಿಲ್ಡರ್ ಸಂತೋಷ್ ಮನೆಯಲ್ಲಿ 40 ಕೋಟಿ ಸಿಕ್ಕಿದ್ದು ಸುಳ್ಳು ಎಂದು ಬಿಲ್ಡರ್ ಸಂತೋಷ್ ಸಹೋದರ ದೈವಿಕ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಾಜಿನಗರದ ಕೇತಮಾರನಹಳ್ಳಿ ಅಪಾರ್ಟ್ಮೆಂಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಈ ವೇಳೆ 40 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿತ್ತು. ಸದ್ಯ, ಹಣದ ಮೂಲದ ಬಗ್ಗೆ ಐಟಿ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ.