ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಮತ್ತಷ್ಟು ಬಲ ತುಂಬಲು ಮುಂದಾಗಿದ್ದು, ಶೀಘ್ರವೇ 4 ಸಾವಿರ ಹೊಸ ಬಸ್ ಗಳನ್ನು ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಬಗೆಗಿನ ವಂದನಾ ನಿರ್ಣಯದ ಬಗ್ಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಿದ್ದರಿದ್ದೇವೆ. ಶಕ್ತಿ ಯೋಜನೆಯ ಪೂರ್ಣ ಲಾಭ ಮಹಿಳೆಯರಿಗೆ ತಲುಪಲು, ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಿಗಳಿಗೆ ಬಸ್ಸು ಕೊರತೆ ನೀಗಿಸಲು 4 ಸಾವಿರ ಹೊಸ ಬಸ್ಸು ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿದ್ದು, ಈವರೆಗೆ 18 ಕೋಟಿ ಮಂದಿ ಮಹಿಳಾ ಪ್ರಯಾಣಿಕರು ಇದರ ಲಾಭ ಪಡೆದಿದ್ದಾರೆ. ಶಕ್ತಿ ಯೋಜನೆಯಿಂದಾಗಿ ಬಸ್ಸುಗಳ ಕೊರತೆ ಉಂಟಾಗಿದೆ ಎಂಬ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ 4 ಸಾವಿರ ಬಸ್ ಗಳ ಖರೀದಿಗೆ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.