![](https://kannadadunia.com/wp-content/uploads/2024/01/JEE-Main-Joint-entrance-exam-btech-barch-nta.png)
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮೇ 8 ರಂದು 402 ಪಿಎಸ್ ಐ ಹುದ್ದೆಗಳ ನೇರ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಮೇ 8 ಲಿಖಿತ ಪರೀಕ್ಷೆ ನಡೆಯಲಿದ್ದು, ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಗೃಹ ಇಲಾಖೆಗೆ ನೀಡಲಾಗಿದ್ದು, ಅವರಿಗೆ ಮಾತ್ರ ಲಿಖಿತ ಪರೀಕ್ಷೆ ನಡೆಯಲಿದೆ.
ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ 545 ಪಿಎಸ್ ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಿತ್ತು. ಇದೀಗ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕೆಇಎಗೆ ನೀಡಿದೆ.