ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕೇಂದ್ರ ಸಚಿವ ವಿ. ಸೋಮಣ್ಣ, ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸೇರಿದಂತೆ ಅನೇಕ ರಾಜಕೀಯ ನಾಯಕರು, ರೈತರು, ಕನ್ನಡ ಪರ ಸಂಘಟನೆಗಳ ಪ್ರಮುಖ ವಿರುದ್ಧದ ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 43 ಕ್ರಿಮಿನಲ್ ಪ್ರಕರಣಗಳನ್ನು ಅಭಿಯೋಜನೆಯಿಂದ ವಾಪಸ್ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಪೋಲಿಸ್ ಹಾಗೂ ಕಾನೂನು ಇಲಾಖೆಗಳ ಅಭಿಪ್ರಾಯ ಪಡೆದುಕೊಂಡು ಸಚಿವ ಸಂಪುಟ ಉಪಸಮಿತಿ ಶಿಫಾರಸು ಆಧರಿಸಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ 43 ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸಿದೆ.
ಬಿಜೆಪಿ ನಾಯಕರಾದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಹಿರೇಕೆರೂರು ಶಾಸಕ ಯು.ಬಿ. ಬಣಕಾರ್, ಮಾಜಿ ಸಚಿವ ಬಿ.ಆರ್. ಯಾವಗಲ್, ಮಾಜಿ ಶಾಸಕರಾದ ಅನಿಲ್ ಬೆನಕೆ, ಬಿ.ಎಂ. ಸುಕುಮಾರ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲಾಗಿದೆ.