alex Certify SHOCKING: ರಾಜ್ಯದಲ್ಲಿ 4 ತಿಂಗಳಲ್ಲಿ 430 ಕೊಲೆ, 198 ಅತ್ಯಾಚಾರ, 7 ಸಾವಿರ ಸೈಬರ್ ಕ್ರೈಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ರಾಜ್ಯದಲ್ಲಿ 4 ತಿಂಗಳಲ್ಲಿ 430 ಕೊಲೆ, 198 ಅತ್ಯಾಚಾರ, 7 ಸಾವಿರ ಸೈಬರ್ ಕ್ರೈಂ

ಬೆಂಗಳೂರು: ರಾಜ್ಯದಲ್ಲಿ 2024ರ ಜನವರಿಯಿಂದ ಏಪ್ರಿಲ್ 30ರವರೆಗೆ ಸುಮಾರು 430 ಕೊಲೆಗಳು, 198 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಕೊಲೆ, ಅತ್ಯಾಚಾರ, ಡ್ರಗ್ಸ್ ಮಾಫಿಯಾ, ಸೈಬರ್ ಅಪರಾಧಗಳು ಹೆಚ್ಚಳವಾಗಿರುವುದು ಎನ್.ಸಿ.ಆರ್.ಬಿ. ನೀಡಿರುವ ಅಂಕಿ ಅಂಶಗಳಿಂದ ಬಹಿರಂಗವಾಗಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ –ಎನ್.ಸಿ.ಆರ್.ಬಿ. ಮಾಹಿತಿ ಅನ್ವಯ ಕೊಲೆ, ಅತ್ಯಾಚಾರ, ಮಹಿಳೆಯರು ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಸೈಬರ್ ಕ್ರೈಂ, ಇತರೆ ಅಪರಾಧ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ.

2024ರ ಜನವರಿಯಿಂದ ಏಪ್ರಿಲ್ 30ರವರೆಗೆ 198 ಅತ್ಯಾಚಾರ, 2327 ಮಹಿಳೆಯರ ಮೇಲೆ ದೌರ್ಜನ್ಯ, 1262 ಮಕ್ಕಳ ಮೇಲೆ ದೌರ್ಜನ್ಯ, 6063 ಹಲ್ಲೆ ಪ್ರಕರಣ, 7421 ಸೈಬರ್ ಕ್ರೈಂ, 2243 ವಂಚನೆ ಪ್ರಕರಣ, 450ಕ್ಕೂ ಅಧಿಕ ಸುಲಿಗೆ ಪ್ರಕರಣಗಳು ದಾಖಲಾಗಿವೆ.

ಹುಬ್ಬಳ್ಳಿ ವಿದ್ಯಾರ್ಥಿನಿಯರಾದ ನೇಹಾ ಹಿರೇಮಠ, ಅಂಜಲಿ ಅಂಬಿಗೇರ, ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಬಾಲಕಿ ಮೀನಾ ಸೇರಿದಂತೆ ಹಲವು ಕೊಲೆ ಪ್ರಕರಣಗಳು ಇತ್ತೀಚೆಗೆ ನಡೆದಿವೆ. ನೇಹಾ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ನಡೆಸುತ್ತಿದ್ದು, ಉಳಿದ ಪ್ರಕರಣಗಳನ್ನು ಆಯಾ ಠಾಣಾ ವ್ಯಾಪ್ತಿಯ ಪೊಲೀಸರು ತನಿಖೆ ನಡೆಸಿದ್ದಾರೆ. ಇವುಗಳನ್ನು ಗಮನಿಸಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಕೇಳಿ ಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...