ತಿರುವನಂತಪುರಂ: ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪಕ್ಕದ ರಾಜ್ಯ ಕೇರಳದಲ್ಲಿ ರೂಪಾಂತರಿ ವೈರಸ್ ಸ್ಫೋಟಗೊಂಡಿದೆ. ಒಂದೇ ದಿನದಲ್ಲಿ 44 ಜನರಲ್ಲಿ ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ 44 ಜನರಲ್ಲಿ ಹೊಸದಾಗಿ ಒಮಿಕ್ರಾನ್ ಪತ್ತೆಯಾಗಿದ್ದು, ಈ ಮೂಲಕ ಕೇರಳದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಸೋಂಕು ಪತ್ತೆಯಾದ 23 ಜನರು ಯುಕೆಯಿಂದ ಆಗಮಿಸಿದವರಾಗಿದ್ದಾರೆ. ಎರ್ನಾಕುಲಂ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 37 ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ರಾಜ್ಯದಲ್ಲಿ ಇಬ್ಬರು ಮಾತ್ರ ಸೋಂಕಿನಿಂದ ಗುಣಮುಖರಾಗಿದ್ದಾರೆ. ಹೊಸ ವರ್ಷಾಚರಣೆ ನಡುವೆಯೇ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಸಮುದಾಯಗಳಿಗೆ ಹರಡದಂತೆ ಜನರು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.