ಬೆಂಗಳೂರು : ಬೆಂಗಳೂರಿನಲ್ಲಿ ಮಹಾಮಾರಿ ‘ಡೆಂಗ್ಯೂ’ ಜ್ವರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರಲ್ಲಿ ಆತಂಕ ಶುರುವಾಗಿದೆ.
ಡೆಂಗ್ಯೂ ನಿಯಂತ್ರಣ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ. ನಂತರ ಮಾತನಾಡಿದ ಸಚಿವರು ಬೆಂಗಳೂರಿನಲ್ಲೇ 4427 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ, ಈ ಬಗ್ಗೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದಿಂದ 7 ಜನರು ಮೃತಪಟ್ಟಿದ್ದಾರೆ ಎಂದು ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.
ಕಳೆದ 2 ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಗುಂಡೂರಾವ್ ಸೂಚನೆ ನೀಡಿದರು. ಡೆಂಗ್ಯೂ ಕುರಿತಂತೆ ಜಾಗೃತಿ ಮಾಡಿದರೆ ಸಾಲದು ಈ ಬಗ್ಗೆ ಆರೋಗ್ಯ ಕಾರ್ಯಕರ್ತರು ಜನರಲ್ಲಿ ಎಚ್ಚರಿಕೆ ಮೂಡಿಸಬೇಕು ಎಂದರು.