alex Certify ಬೆಂಗಳೂರು ನಗರದಲ್ಲೇ 4427 ಡೆಂಗ್ಯೂ ಕೇಸ್ ಪತ್ತೆ, ಏಳು ಮಂದಿ ಸಾವು-ಸಚಿವ ದಿನೇಶ್ ಗುಂಡೂರಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ನಗರದಲ್ಲೇ 4427 ಡೆಂಗ್ಯೂ ಕೇಸ್ ಪತ್ತೆ, ಏಳು ಮಂದಿ ಸಾವು-ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಬೆಂಗಳೂರಿನಲ್ಲಿ ಮಹಾಮಾರಿ ‘ಡೆಂಗ್ಯೂ’ ಜ್ವರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರಲ್ಲಿ ಆತಂಕ ಶುರುವಾಗಿದೆ.

ಡೆಂಗ್ಯೂ ನಿಯಂತ್ರಣ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ. ನಂತರ ಮಾತನಾಡಿದ ಸಚಿವರು ಬೆಂಗಳೂರಿನಲ್ಲೇ 4427 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ, ಈ ಬಗ್ಗೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದಿಂದ 7 ಜನರು ಮೃತಪಟ್ಟಿದ್ದಾರೆ ಎಂದು ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ಕಳೆದ 2 ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಗುಂಡೂರಾವ್ ಸೂಚನೆ ನೀಡಿದರು. ಡೆಂಗ್ಯೂ ಕುರಿತಂತೆ ಜಾಗೃತಿ ಮಾಡಿದರೆ ಸಾಲದು ಈ ಬಗ್ಗೆ ಆರೋಗ್ಯ ಕಾರ್ಯಕರ್ತರು ಜನರಲ್ಲಿ ಎಚ್ಚರಿಕೆ ಮೂಡಿಸಬೇಕು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...