ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಗ್ರಾಮದಲ್ಲಿ ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದ 46 ಮಕ್ಕಳು ಅಸ್ವಸ್ಥರಾಗಿದ್ದಾರೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನ ಬಿಸಿಯೂಟದ ವೇಳೆ ಮಕ್ಕಳಿಗೆ ಶೇಂಗಾ ಚಿಕ್ಕಿ ನೀಡಲಾಗಿದ್ದು, ಅವುಗಳನ್ನು ತಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ.
ಪಾವಗಡ ಸರ್ಕಾರಿ ಆಸ್ಪತ್ರೆಗೆ ಅಸ್ವಸ್ಥರಾದ ಮಕ್ಕಳನ್ನು ದಾಖಲಿಸಲಾಗಿದೆ. ಚಿಕಿತ್ಸೆ ನಂತರ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.