alex Certify 48ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ರಾಜಮೌಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

48ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ರಾಜಮೌಳಿ

ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಜಮೌಳಿ ಇಂದು ತಮ್ಮ 48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ರಾಜಮೌಳಿ ನಿರ್ದೇಶನದ ಸಿನಿಮಾವೆಂದರೆ ಎಲ್ಲಾ ಭಾಷೆಯ ಸಿನಿಪ್ರೇಕ್ಷಕರು ಕಾತುರದಿಂದ ಕಾಯುತ್ತಿರುತ್ತಾರೆ. 2001ರಲ್ಲಿ ತೆರೆಕಂಡ ‘ಸ್ಟೂಡೆಂಟ್ ನಂಬರ್ 1’ ತೆಲುಗು ಚಿತ್ರದ ಮೂಲಕ ರಾಜಮೌಳಿ ನಿರ್ದೇಶನಕ್ಕಿಳಿದರು ನಂತರ ಸಾಕಷ್ಟು ಸಿನಿಮಾಗಳನ್ನು ನಿರ್ದೇಶಿಸಿದರು, 2015ರಲ್ಲಿ ತೆರೆಕಂಡ ‘ಬಾಹುಬಲಿ ದಿ ಬಿಗಿನಿಂಗ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ 650ಕೋಟಿ ಬಾಚಿಕೊಳ್ಳುವ ಮೂಲಕ ಹೊಸ ದಾಖಲೆ ಬರೆಯಿತು. ನಟ ಪ್ರಭಾಸ್ ಗೆ ಈ ಚಿತ್ರದಿಂದ ಪ್ರಪಂಚಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡರು. ನಂತರ 2017ರಲ್ಲಿ ಬಂದ ಬಾಹುಬಲಿಯ ಎರಡನೇ ಭಾಗ 1810 ಕೋಟಿ ಬಾಚಿಕೊಳ್ಳುವ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಿತು.

ರಾಜಾಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು ಮುಂದಿನ ವರ್ಷ ಜನವರಿ 7ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ ಸುಮಾರು 400 ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಮಾಡಿದ್ದು ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ ಇಬ್ಬರು ಸ್ಟಾರ್ ನಟರು ಅಭಿನಯಿಸಿದ್ದಾರೆ ರಾಜಮೌಳಿ ಅವರಿಗೆ ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರಿಂದ ಶುಭಾಶಯ ಮಹಾಪೂರವೇ ಹರಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...